ಬೆಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಸೋನಿಯಾ(24) ಮೃತ ಯುವತಿಯಾಗಿದ್ದು, ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ದೆಹಲಿ ಮೂಲದ ಸೋನಿಯಾ ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.
ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆಯಾಗಿದೆ. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಸ್ಪಾ ಮಾಲೀಕ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದಿದ್ದಾಗ ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾರೆ. ಮನೆ ಬಾಗಿಲು ತೆರೆಯದಿದ್ದಾಗ ಸ್ಪಾ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು,
Puri without using oil: ಎಣ್ಣೆ ಬಳಸದೇ ಆರೋಗ್ಯಕರ ಪೂರಿಗಳನ್ನು ತಯಾರಿಸಬಹುದು.! ಹೇಗೆ ಗೊತ್ತಾ..? ಇಲ್ಲಿದೆ ಟಿಪ್ಸ್
ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಇನ್ನೂ ಮೃತ ಸೋನಿಯಾ ಪೋಷಕರು ದೆಹಲಿಯಿಂದ ಆಗಮಿಸುತ್ತಿದ್ದಾರೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.