ಮೈಸೂರು: ಟಿ. ನರಸೀಪುರ ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಸುಮಾರು ೨೭೫ ಮಕ್ಕಳು ಓದುತ್ತಿದ್ದು, ಇಲ್ಲಿ ಮೂಲಸೌಕರ್ಯ ಕೊರತೆಯಿದೆ. ಹೀಗಿದ್ದರೂ ಸಂಬಂಧಿಸಿದ ಶಾಸಕರು, ಸಚಿವರು ಈ ಬಗ್ಗೆ ಗಮನ ಹರಿಸಿಲ್ಲ. ಹೀಗಾಗಿ ಕೂಡಲೇ ಸೌಲಭ್ಯ ಕಲ್ಪಿಸದಿದ್ದರೆ ಆಮ್ ಆದ್ಮಿ ಪಕ್ಷದ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ರಂಗಯ್ಯ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಶಾಲೆಯಲ್ಲಿ ಶೌಚಾಲಯವಿಲ್ಲ.
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಶಾಲೆಯ ಕಟ್ಟಡ ಮೇಲ್ಭಾಗ ಕಿತ್ತುಹೋಗಿದ್ದು, ಆತಂಕದಲ್ಲಿ ವಿದ್ಯಾರ್ಥಿನಿಯರು ಕಾಲ ಕಳೆಯುವಂತಾಗಿದೆ. ಶಾಲೆಗೆ ಸೂಕ್ತ ಕಾಂಪೌAಡ್ ಇಲ್ಲ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲವಾಗಿದೆ. ಈಗಲಾದರೂ ಸಂಬAಧಪಟ್ಟರು ಇತ್ತ ಗಮನ ಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಉಷಾ ಸಂಪತ್ಕುಮಾರ್, ವಿಶ್ವನಾಥ್ ಕುಲಕರ್ಣಿ, ಶಿವಣ್ಣ, ಸೋಸಲೆ ಸಿದ್ದರಾಜು ಹಾಜರಿದ್ದರು.