ಕಾಂಗ್ರೆಸ್ ರಾಜ್ಯ ಸರ್ಕಾರ ಸಾರಿಗೆ ಬಸ್ ಗಳ 15 % ದರ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಕ್ಷ ನೂರಾರು ಕಾರ್ಯಕರ್ತರು ಎತ್ತಿನ ಬಂಡಿ ಎಳೆಯುವ ಮೂಲಕ ತೀವ್ರ ಪ್ರತಿಭಟನೆಯನ್ನು ನಡೆಸಿದರು. ಕಾಂಗ್ರೆಸ್ ಸರ್ಕಾರದ “ಎತ್ತಿನ ಬಂಡಿ ಗ್ಯಾರಂಟಿ ” , ” ಸರ್ಕಾರ ಜಾಲಿ ಜಾಲಿ , ಜನರ ಜೇಬು ಖಾಲಿ ಖಾಲಿ ” ಎಂದು ಘೋಷಣೆ ಕೂಗುವ ಮೂಲಕ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.
ಪ್ರತಿಭಟನೆಗೆ ನೇತೃತ್ವವನ್ನು ವಹಿಸಿದ್ದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ” ಕಾಂಗ್ರೆಸ್ ಸರ್ಕಾರವು ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ನಕಲು ಮಾಡಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ನಿಲ್ಲಿಸದೆ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ. ಇದಕ್ಕಾಗಿ ದರ ಏರಿಕೆಗಳನ್ನು ಮಾಡುತ್ತಿರುವುದು ಎಂದಿಗೂ ಸಹಿಸಲು ಸಾಧ್ಯವಿಲ್ಲ.
PM Surya Ghar Yojana: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಬೇಕಾ..? ಹಾಕಿದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಎರಡು ಬಜೆಟ್ ಗಳಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ದುಡ್ಡು ಯಾರ ಜೇಬು ಸೇರುತ್ತಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ಈಗಾಗಲೇ ಸ್ಟ್ಯಾಂಪ್ ಡ್ಯೂಟಿ, ಅಬಕಾರಿ ಸುಂಕ, ವಿದ್ಯುತ್ ದರ, ಹಾಲಿನ ದರ ಎಲ್ಲವನ್ನು ಗಗನಕ್ಕೆ ಮುಟ್ಟಿಸಿದ್ದಾರೆ. ಈಗ ಬಸ್ ದರ ಏರಿಸಿದ್ದಾರೆ,
ಮುಂದಿನ ದಿನಗಳಲ್ಲಿ ನೀರಿನ ದರವನ್ನು ಏರಿಸುತ್ತಿದ್ದಾರೆ. ಈ ರೀತಿಯ ಜನ ಪರ ಕಾಳಜಿ ಇಲ್ಲದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿವಾಳಿಯಾಗುವ ಹಂತಕ್ಕೆ ತಲುಪಿರುವ ಅನುಮಾನ ಜನತೆಯಲ್ಲಿ ಕಾಡುತ್ತಿದೆ ಎಂದು ಟೀಕಿಸಿದರು. ಬಸ್ ದರ ಏರಿಕೆಯನ್ನು ಈ ಕೂಡಲೇ ಹಿಂಪಡೆಯದಿದ್ದಲ್ಲಿ ಪಕ್ಷವು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯನ್ನು ನಡೆಸುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡರುಗಳಾದ ನಂಜಪ್ಪ ಕಾಳೇಗೌಡ, ಲೋಹಿತ್, ಗೋಪಾಲ್ ,ಸುರೇಶ್ ,
ಡಾ. ಕೇಶವ್ , ವೀಣಾ , ಭಾನುಪ್ರಿಯ, ಪುಷ್ಪ ಕೇಶವ್, ಶಶಿಧರ ಆರಾಧ್ಯ , ಅಶೋಕ್ ಮೃತ್ಯುಂಜಯ, ನವೀನ್ ,ಪುಟ್ಟಣ್ಣ, ಮುನೇಶ್ ಸರವಣ , ಶಾಶವಲಿ ಇನ್ನಿತರ ನಾಯಕರು ಭಾಗವಹಿಸಿದ್ದರು.