ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆಗೆ ಕಲುಷಿತ ನೀರು ಬಿಟ್ಟು ಸುತ್ತಮುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅನೈರ್ಮಲ್ಯ ವಾತಾವರಣ ಉಂಟಾಗಿರುವ ಸಮಸ್ಯೆಯನ್ನು ಆಮ್ ಆದ್ಮಿ ಪಕ್ಷವು ನಿನ್ನೆ ಮಾಧ್ಯಮಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಯಶವಂತಪುರ ಶಾಸಕ ಎಸ್. ಟಿ. ಸೋಮಶೇಖರ್ ರವರ ಬೆಂಬಲಿಗರು ಏಕಾಏಕಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲಿಗೆ ಯತ್ನಿಸಿದ ದುರ್ಘಟನೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್ ಪಕ್ಷವು ಎಂದಿಗೂ ಈ ರೀತಿಯ ಗೂಂಡಾ ವರ್ತನೆಗಳಿಗೆ ಬಗ್ಗುವುದಿಲ್ಲ ಹಾಗೂ ಜಗ್ಗುವುದಿಲ್ಲ.
Custard Apple: ಚಳಿಗಾಲದಲ್ಲಿ ಸೀತಾಫಲ ಹಣ್ಣು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸ್ಥಳೀಯ ಶಾಸಕರುಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ಸೌಮ್ಯ ರೆಡ್ಡಿ ಗಮನಹರಿಸಿದರೆ ಒಳ್ಳೆಯದು. ಪಕ್ಷದ ಕಾರ್ಯಕರ್ತರು ಜನತೆಯ ಮೂಲ ಸೌಕರ್ಯಗಳು ಹಾಗೂ ಸಮಸ್ಯೆಗಳ ಬಗ್ಗೆ ಹೋರಾಟವನ್ನು ಮುಂದುವರಿಸಿಕೊಂಡು ಬರುತ್ತದೆ ಎಂದು ತಿಳಿಸಿದರು.
ಪಕ್ಷವು ಬೆಂಗಳೂರಿನಲ್ಲಿ ಜನತೆಯ ಧ್ವನಿಯಾಗಿ ಈಗಾಗಲೇ ಅನೇಕ ಹೋರಾಟಗಳನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದೆ. ಇದಕ್ಕಾಗಿ ಸಾಕಷ್ಟು ಸುಳ್ಳು ಸುಳ್ಳು ಕೇಸುಗಳನ್ನು ಹಾಕುವ ಮೂಲಕ, ಹಾಗೂ ಗುಂಡ ಪ್ರವೃತ್ತಿ ಯ ಮೂಲಕ ನಮ್ಮ ಧ್ವನಿಯನ್ನು ಯಾವುದೇ ಕಾರಣಕ್ಕೂ ಅಡಗಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಈ ಹೇರೋಹಳ್ಳಿ ಕೆರೆಯ ಅಭಿವೃದ್ಧಿಗಾಗಿ ಈಗಾಗಲೇ ಕೋಟಿಗಟ್ಟಲೆ ಅನುದಾನ ವ್ಯಯ ಮಾಡಲಾಗಿದೆ.
ಇದು ಸಂಪೂರ್ಣ ಭ್ರಷ್ಟಾಚಾರಿಗಳ ಪಾಲಾಗಿ ಸ್ಥಳೀಯ ಜನತೆ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದ ವಾತಾವರಣ ಉಂಟಾಗಿದೆ. ಶಾಸಕ ಎಸ್ ಟಿ ಸೋಮಶೇಖರ್ ಕೂಡಲೇ ಇತ್ತ ಕಡೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ತೀವ್ರ ಮಟ್ಟದ ಹೋರಾಟವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಡಾ.ಸತೀಶ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಹಾಗೂ ಕಾನೂನು ವಿಭಾಗದ ವಕೀಲ ಮಹಮ್ಮದ್ ಆಲಿ ಭಾಗವಹಿಸಿದ್ದರು.