ಖ್ಯಾತ ನಟ ಆಮೀರ್ ಖಾನ್ (Aamir Khan) ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಇರಾ ಮದುವೆ ಶಾಸ್ತ್ರಗಳು ನಡೆದಿದ್ದು, ಎರಡೂ ಕುಟುಂಬಗಳು ಭಾಗಿಯಾಗಿವೆ. ಇರಾ ಖಾನ್ (Ira Khan) ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ.
ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಮನೆಯವರು ಅವಕಾಶ ಕೊಡದೇ ಸಾಂಪ್ರದಾಯಿಕವಾಗಿ ನೂಪುರ್ ಮನೆಯಲ್ಲಿ ಮದುವೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಅದರಂತೆ ಜನವರಿ 3ಕ್ಕೆ ಮದುವೆ ಫಿಕ್ಸ್ ಆಗಿದೆ.
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ನ್ಯೂ ಇಯರ್ ದಿನ ಮಧ್ಯರಾತ್ರಿ 2.15ರ ವರೆಗೆ ರೈಲು ಸಂಚಾರ
ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿತ್ತು ಈ ಜೋಡಿ. ಇದೀಗ ಇರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಾಗಂತ ರಿಜಿಸ್ಟರ್ ಮದುವೆಯಷ್ಟೇ ಆಗುವುದಿಲ್ಲವಂತೆ. ರಿಜಿಸ್ಟರ್ ಮದುವೆಯ ನಂತರ ಉದಯಪುರದಲ್ಲಿ (Udaipur) ಸಂಪ್ರದಾಯಿಕವಾಗಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಒಟ್ಟು ಮೂರು ದಿನಗಳ ಕಾಲ ಈ ಮದುವೆ ನಡೆಯಲಿದೆ.
ನೂಪುರ್ ಶಿಖಾರೆ (Nupur Shikhare) ಮತ್ತು ಇರಾ ಖಾನ್ ಪ್ರೀತಿಗೆ ಹಲವು ವರ್ಷಗಳು. ಆಕೆಗೆ ಫಿಸಿಕಲ್ ಟ್ರೈನರ್ ಆಗಿದ್ದ ನೂಪುರ್ ನನ್ನು ಇರಾ ಇಷ್ಟಪಡುತ್ತಾಳೆ. ಅವನ ಜೊತೆಯೇ ಹಲವು ಟ್ರಿಪ್ ಗಳನ್ನು ಕೂಡ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಒಂದೇ ಮನೆಯಲ್ಲೇ ಹಲವು ದಿನಗಳಿಂದ ವಾಸಿಸುತ್ತಿದ್ದರು. ಇದೊಂದು ಸಹಜೀವನ ಎಂದೇ ಬಾಲಿವುಡ್ ಮಾತಾಡಿಕೊಂಡಿತ್ತು. ಅದಕ್ಕೀಗ ಫುಲ್ ಸ್ಟಾಪ್ ಇಡುವಂತಹ ಕೆಲಸವನ್ನು ಈ ಜೋಡಿ ಮಾಡಿದೆ.