‘ಬಿಗ್ ಬಾಸ್’ ಮೂಲಕ ಸಾಕಷ್ಟು ಖ್ಯಾತಿ ಘಳಿಸಿರುವ ಅಬ್ದು ರೋಜಿಕ್ ಸದ್ಯ ಹೊಸ ಜೀವನಕ್ಕೆ ಅಡಿ ಇಡಲು ಮುಂದಾಗಿದ್ದಾರೆ.ಬಿಗ್ ಬಾಸ್ ಮೂಲಕ ಕೋಟ್ಯಧಿಪತಿ ಆಗಿರೋ ತಜಿಕಿಸ್ತಾನ್ ದೇಶದ ಗಾಯಕ ಅಬ್ದು ರೋಜಿಕ್ ಮದುವೆ ಆಗುತ್ತಿದ್ದಾರೆ.
ಶಾರ್ಜಾದ ಅಮಿರಾ ಎಂಬ 19 ವರ್ಷದ ಯುವತಿಯನ್ನು 20 ವರ್ಷದ ಅಬ್ದು ರೋಜಿಕ್ ಮದುವೆಯಾಗುತ್ತಿದ್ದಾರೆ. ಅಬ್ದು ಅವರ ಕುಳ್ಳತನವನ್ನು ಲೆಕ್ಕಿಸದೆ ಅಮಿರಾ ಆತನನ್ನು ಮದುವೆಯಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಡೈಮಂಡ್ ರಿಂಗ್ ಹಿಡಿದುಕೊಂಡಿರೋ ಫೋಟೋನ ಅಬ್ದು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಕ್ಯಾಪ್ಶನ್ ನೀಡಿರುವ ಅಬ್ದು, ‘ನನ್ನನ್ನು ಗೌರವಿಸುವ, ಪ್ರೀತಿಸುವ ಹುಡುಗಿ ಸಿಗುತ್ತಾಳೆ ಎಂದು ನಾನು ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂಬುದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.
‘ನಿಮಗೆಲ್ಲ ಗೊತ್ತಿರುವಂತೆ ನನಗೆ 20 ವರ್ಷ. ಪ್ರೀತಿಯಲ್ಲಿ ಬೀಳಬೇಕು, ನಾನು ಪ್ರೀತಿಸೋ ಹುಡುಗಿ ನನ್ನನ್ನು ಗೌರವಿಸಬೇಕು, ಅತಿಯಾಗಿ ಪ್ರೀತಿ ಮಾಡಬೇಕು ಎನ್ನುವ ಆಸೆ ಇತ್ತು. ಆಗ ಈ ಹುಡುಗಿ ಸಿಕ್ಕಳು. ಹೇಗೆ ಹೇಳಬೇಕು ಎನ್ನುವುದೇ ತಿಳಿಯುತ್ತಿಲ್ಲ. ನಾನು ಸಖತ್ ಎಗ್ಸೈಟ್ ಆಗಿದ್ದೇನೆ. ನಿಮ್ಮೆಲ್ಲರಿಗೂ ಒಂದು ಸರ್ಪ್ರೈಸ್ಇದೆ’ ಎಂದಿರುವ ಅವರು ರಿಂಗ್ ಓಪನ್ ಮಾಡಿ ತೋರಿಸಿದ್ದಾರೆ.