ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರೈತರಲ್ಲಿ ಕ್ಷಮೆ ಕೇಳುವುದರಿಂದ ವಿದೇಶದಲ್ಲಿ ಅವರ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತದೆ. ಇದನ್ನು ನಾವು ಬಯಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು. ಈ ಕುರಿತು ಟ್ವೀಟ್ ಮಾಡಿದ ಅವರು, ಪ್ರಧಾನಿ ಮೋದಿ ಕ್ಷಮೆ ಕೇಳುವುದು ನಮಗೆ ಇಷ್ಟವಿಲ್ಲ. ಜೊತೆಗೆ ವಿದೇಶದಲ್ಲಿ ಅವರ ಖ್ಯಾತಿಯನ್ನು ಕೆಡಿಸಲು ನಾವು ಬಯಸುವುದಿಲ್ಲ.
हम नहीं चाहते देश का प्रधानमंत्री माफी मांगे। हम उनकी प्रतिष्ठा विदेश में खराब नहीं करना चाहते। कोई फ़ैसला होगा तो बगैर किसानों की मर्ज़ी के भारत में फ़ैसला नहीं होगा। हमने ईमानदारी से खेत में हल चलाया लेकिन दिल्ली की कलम ने भाव देने में बेईमानी की ।#FarmersProtest
— Rakesh Tikait (@RakeshTikaitBKU) December 26, 2021
ಪುನಃ ರೈತರ ಒಪ್ಪಿಗೆ ಇಲ್ಲದೆ ಕೃಷಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಕೈಗೊಂಡರೆ ಆ ಕಾನೂನನ್ನು ತರಲಾಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು. ಸುಮಾರು ಒಂದು ವರ್ಷದಿಂದ ಹಲವಾರು ರೈತ ಸಂಘಗಳು ಕೃಷಿ ಕಾಯ್ದೆ ರದ್ದುಗೊಳಿಸಲು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರವು ಮೂರು ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಿತ್ತು.