ಬೆಂಗಳೂರು:- ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಆದರೆ, ವಲಸಿಗ ಬಿಜೆಪಿಗರಾದ ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೌದು, ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಹಲವು ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಸಿದ್ದಾರೆ. ಇನ್ನೂ ಮಾಜಿ ಸಚಿವರಾದ ಸಿ ಟಿ ರವಿ, ವಿ ಸೋಮಣ್ಣ ಅಸಮಾಧಾನಗೊಂಡಿದ್ರೆ, ಇತ್ತ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮೌನಕ್ಕೆ ಜಾರಿದ್ದಾರೆ. ಅಲ್ಲದೇ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಸಾಕಷ್ಟು ಮನಸ್ತಾಪಕ್ಕೆ ಕಾರಣವಾಗಿದೆ.
ಈಗಾಗಲೇ ಮೂಲ ಬಿಜೆಪಿ ಸೇರ್ಪಡೆಯಾದ 17 ಜನ ವಲಸಿಗ ನಾಯಕರಲ್ಲಿ ಹೆಚ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಎಸ್ ಟಿ ಸೋಮಶೇಖರ್, ಕೆ ಗೋಪಾಲಯ್ಯ, ಹಾಗೂ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿತ್ತು.
ಅಲ್ಲದೇ ಕೆಲವು ವಲಸಿಗ ಬಿಜೆಪಿಗರಿಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಕೊಟ್ಟ ಮಾತನ್ನ ಈಡೇರಿಸಿಲ್ಲ ಎಂಬ ಅಸಮಾಧಾನವನ್ನ ವ್ಯಕ್ತಪಡಿಸಿದರು. ಇದೀಗ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಹುದ್ದೆಯನ್ನ ಅಲಂಕರಿಸಿರುವ ವಿಚಾರವಾಗಿ ಮೂಲ ವಲಸಿಗರು ಮೌನಕ್ಕೆ ಜಾರಿದ್ದಾರೆ.
ಇನ್ನೂ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಪದಗ್ರಹಣಕ್ಕೆ ಹಲವಾರು ಬಿಜೆಪಿ ಘಟನುಘಟಿ ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿದಂತೆ ಬಹುತೇಕ ಎಲ್ಲಾ ವಲಸಿಗ ಬಿಜೆಪಿಗರು ಗೈರಾಗಿದ್ದರೆ.
ನೂತನ ಅಧ್ಯಕ್ಷರಾದ ಬಿವೈ ವಿಜಯೇಂದ್ರರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ಬಿಜೆಪಿ ನಾಯಕರಾದ ಆರ್. ಅಶೋಕ್, ಅಶ್ವಥ್ ನಾರಾಯಣ, ಸಿಟಿ ರವಿ, ವಿ. ಸೋಮಣ್ಣ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾಳಿ, ಎಸ್ಟಿ ಸೋಮಶೇಖರ್, ಡಾ.ಕೆ. ಸುಧಾಕರ್ ಮುಂತಾದ ಹಿರಿಯ ನಾಯಕರು ಗೈರಾಗಿದ್ದರು.