ವಿಜಯಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದ ಬಳಿಸಿದ ಪ್ರಯಾಣಿಕನಿಗೆ ಶೂ ಸೇವೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಿಲ್ಲರೆ ಹಣ ಕೊಡುವ ವಿಷಯವಾಗಿ ಪ್ರಯಾಣಿಕ ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.
ಇದರಿಂದ ಕುಪಿತಗೊಂಡ ಲೇಡಿ ಕಂಡಕ್ಟರ್ ಬೂಟಿನಿಂದ ಧರ್ಮದೇಟು ನೀಡಿದ್ದಾರೆ. ಬಳಿಕ ಲೇಡಿ ಕಂಡಕ್ಟರ್ ಗೆ ಜನ ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ಈ ವೇಳೆ ಲೇಡಿ ಕಂಡಕ್ಟರ್ ಥಳಿಸುತ್ತಿರೋ ದೃಶ್ಯಗಳನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.