ಗದಗ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ವತಿಯಿಂದ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನೇಹಾಗೆ ಸಾವಿಗೆ ನ್ಯಾಯ ಸಿಗಬೇಕು, ಫಯಾಜ್ ನನ್ನ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪಟ್ಟಣದ ಶಿಗ್ಲಿ ನಾಕಾ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ನಡು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ನ್ಯಾಯ ಬೇಕು ಅಂತಾ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ನೂರಾರು ಎಬಿವಿಪಿ ಕಾರ್ಯಕರ್ತರು ಭಾಗಿಯಾಗಿದ್ದರು.