ಹುಬ್ಬಳ್ಳಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ, ಎಸ್ಇಪಿ ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕ ನಗರದ ಪಿ.ಸಿ. ಜಾಬಿನ್ ಕಾಲೇಜಿನ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿತು.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದರೆ ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ತಿರುವು ಸಿಗಲಿದೆ. ವಿದ್ಯಾರ್ಥಿಗಳ ಆಸಕ್ತಿಗೆ ಶಿಸ್ತಿನ ಅಧ್ಯಯನಕ್ಕೆ ಒತ್ತುಕೊಟ್ಟು, ಕೌಶಲಾಧಾರಿತ ಶಿಕ್ಷಣದ ಕನಸನ್ನು ಎನ್ಇಪಿ ಮೂಲಕ ನನಸು ಮಾಡಿಕೊಳ್ಳಬಹುದು. ಆದರೆ, ರಾಜ್ಯ ಸರ್ಕಾರ ಈ ನೀತಿ ಹಿಂಪಡೆಯಲು ತೀರ್ಮಾನಿಸಿರುವುದು ಖಂಡನೀಯ. ನೀತಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಸರಿಪಡಿಸಲು ಅವಕಾಶವಿದೆ. ಶಿಕ್ಷಣ ನೀತಿಯನ್ನೇ ವಿರೋಧಿಸಲು ಹೊರಟಿದ್ದು ರಾಜಕೀಯ ದುರುದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಸಚಿವರುಗಳ ಒಡೆತನದ ಖಾಸಗಿ ಶಾಲಾ ಕಾಲೇಜುಗಳಲ್ಲಿ ಶ್ರೀಮಂತ ವರ್ಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ಎನ್ಇಪಿ ರಾಷ್ಟ್ರಮಟ್ಟದ ಶಿಕ್ಷಣ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ದೊರೆಯುವುದು ಬೇಕಾಗಿಲ್ಲ ಎಂದು ಆರೋಪಿಸಿದರು.
ಸುಮಾರು ಐದುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಹಿ ಮಾಡಿ, ಎನ್ಇಪಿಗೆ ಬೆಂಬಲ ಸೂಚಿಸಿದರು. ವೀರೇಶ ಬಾಳಿಕಾಯಿ, ಸಂದೀಪ ಬೂದಿಹಾಳ, ವಿಠಲ, ಸುಶೀಲ ಇಟಗಿ, ಮೌನೇಶಗೌಡ, ಸಿದ್ದಾರ್ಥ, ನವೀನ ಅನ್ಮೋಲ್, ರಾಘವೇಂದ್ರ ಹಾಗೂ ಇತರರು ಪಾಲ್ಗೊಂಡಿದ್ದರು.