ಗದಗ: ವಿಶ್ವವಿದ್ಯಾಲಯ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು. ಗದಗ ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿ.ವಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಕಾನೂನು ಸಚಿವ ಎಚ್.ಕೆ ಪಾಟೀಲ, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ನೂರಾರು ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ಹಲವು ನಾಮಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಬೆಳಗಾವಿಯಲ್ಲಿ ಔಷಧ ಉಗ್ರಾಣದ ಮೇಲೆ ದಾಳಿ
ರಾಜ್ಯ ಸರ್ಕಾರ ರಾಜ್ಯಪಾಲರ ಹಕ್ಕು ಕಸಿದುಕೊಳ್ಳುತ್ತಿದೆ. ನಮಗೆ ಸಿಎಂ ಹುದ್ದೆ ಬೇಡ, ಕುಲಾಧಿಪತಿ ಹುದ್ದೆ ಬೇಕು. ಶಿಕ್ಷಣ ಸಂಸ್ಥೆಗಳು ರಾಜಕೀಯದಿಂದ ಮುಕ್ತವಾಗಿರಲಿ. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಮಾಡಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಅಂತೆಲ್ಲಾ ನಾಮ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರ ಅಧಿಕಾರ ರಾಜ್ಯಪಾಲರಿಗೆ ಸಿಗಬೇಕು. ರಾಜ್ಯ ಸರ್ಕಾರ ತೆಗೆದುಕೊಂಡ ಆರ್.ಡಿ.ಪಿ.ಆರ್ ವಿವಿ ಕುಲಾಧಿಪತಿ ಬಗೆಗಿನ ನಿರ್ಣಯ ಕೈಬಿಡಬೇಕು. ಹೀಗೆ ಮುಂದುವರೆದ್ರೆ ಅಧಿವೇಶನ ವೇಳೆ ಸುವರ್ಣಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು.