ಬಳ್ಳಾರಿ:- ಬಳ್ಳಾರಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ಎಸಿ ಸ್ಫೋಟಗೊಂಡಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಜರುಗಿದೆ.
ನೇಹಾ ಹತ್ಯೆ ಕೇಸ್: ಕಾಂಗ್ರೆಸ್ ಪರ ಪ್ರಚಾರಕ್ಕಿಳಿದ ತಂದೆ ಹೀರೆಮಠ್..!
ಬಳ್ಳಾರಿ – ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಘಟನೆ ಜರುಗಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಅಲ್ಲದೇ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ. ಗಾಯಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.