ಮಂಗಳೂರು:- ಲೋಕಾಯುಕ್ತ ಅಧಿಕಾರಿಗಳು, ಭರ್ಜರಿ ಕಾರ್ಯಾಚರಣೆ ನಡೆಸಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.
ಸಿ.ಟಿ ರವಿ ವಿರುದ್ಧ FIR: ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್!
ಜಿ.ಎಸ್.ದಿನೇಶ್ ಬಂಧಿತ ಆರೋಪಿ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹೆಸರು ಸೇರ್ಪಡಗೆ ಅರ್ಜಿ ಸಲ್ಲಿಸಿದ್ದರೂ ಒಂದು ವರ್ಷದಿಂದ ಕ್ರಮ ಕೈಗೊಳ್ಳದೇ ಫೈಲ್ ಹಾಗೆಯೇ ಇರಿಸಿದ್ದ.
ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚದ ಬೇಡಿಕೆ ಇಟ್ಟಿದ್ದ. ಈ ಕುರಿತು ಮಂಗಳೂರು ಲೋಕಾಯುಕ್ತ ಕಚೇರಿಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದರು. ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ 4 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.