ಬೆಂಗಳೂರು: 2 ಮತ್ತು 4ನೇ ಶನಿವಾರ ಕಬ್ಬನ್ ಪಾರ್ಕ್ನೊಳಗೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಫೆಬ್ರವರಿ 8 ರಂದು ತೋಟಗಾರಿಕಾ ಇಲಾಖೆ ಆದೇಶ ನೀಡಿದ್ದು, ಪ್ರವಾಸಿಗರು ಹಾಗೂ ಆ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಸಂತಸ ನೀಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಸುಗಮ ಸಂಚಾರಕ್ಕಾಗಿ ಕಬ್ಬನ್ ಪಾರ್ಕ್ ಆವರಣದೊಳಗೆ ಹೈಕೋರ್ಟ್ನಿಂದ ಸಿದ್ದಲಿಂಗಯ್ಯ ವೃತ್ತ ಮತ್ತು ಸಿದ್ದಲಿಂಗಯ್ಯ ವೃತ್ತದಿಂದ ಹೈಕೋರ್ಟ್ ಭಾಗದವರೆಗೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಲ್ಲಿ ಫೆ.14ಕ್ಕೆ ಮದ್ಯ ಮಾರಾಟಕ್ಕೆ ಬ್ರೇಕ್ : ಪ್ರೇಮಿಗಳಿಗೆ ಫುಲ್ ಶಾಕ್!
ಮೂರು ತಿಂಗಳ ಕಾಲ ಪ್ರಾಯೋಗಿಕ ಆಧಾರದ ಮೇಲೆ ಈ ಅವಕಾಶ ನೀಡಲಾಗಿದೆ.
ಕಬ್ಬನ್ ಪಾರ್ಕ್ ಒಳಗೆ ಸಂಚಾರಕ್ಕೆ ಅವಕಾಶ ನೀಡುವುದರಿಂದ ಹೊರಗಿನ ರಸ್ತೆಗಳಲ್ಲಿನ ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಗಲಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಅನುಚೇತ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಕಬ್ಬನ್ ಪಾರ್ಕ್ನೊಳಗೆ ಸಂಚಾರಕ್ಕೆ ಸಾಕಷ್ಟು ಸ್ಥಳಾವಕಾಶವಿದೆ ಎಂದು ಅನುಚೇತ್ ಹೇಳಿದ್ದಾರೆ.
‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂದು ರಾಜ್ಯ ಸರ್ಕಾರದ ಘೋಷಣೆ
ಕೆಲವು ವರ್ಷಗಳಿಂದ ಕಬ್ಬನ್ ಪಾರ್ಕ್ನೊಳಗೆ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಇತರ ಸಾರ್ವತ್ರಿಕ ರಜಾದಿನಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು