ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ಬೈಪಾಸ್ ನಲ್ಲಿ ಅಂಬ್ಯಲೆನ್ಸ್ ಹಾಗೂ ಆಪೆ ಆಟೋ ನಡುವೆ ಅಪಘಾತ ಸಂಭವಿಸಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್, ಹಾಗೂ ಚನ್ನರಾಯಪಟ್ಟಣದಿಂದ ಬಾಗೂರು ಕಡೆಗೆ ಶುಂಠಿ ಕೀಳಲು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಪೆ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
ಇನ್ನೂ ಗಾಯಾಳುಗಳನ್ನು ಹಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಂಬ್ಯುಲೆನ್ಸ್ನಲ್ಲಿದ್ದ ಮೃತದೇಹ ಮತ್ತೊಂದು ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.