ಹೊಸನಗರ : ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಬೈಕ್ ಸವಾರ ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಶಮಂತ್ (25) ಎಂದು ಗುರುತಿಸಲಾಗಿದೆ.
Lakshadweep Trip: ಲಕ್ಷದ್ವೀಪದಲ್ಲಿ ನೋಡಲೇಬೇಕಾದ ಪ್ರವಾಸಿ ತಾಣಗಳು ಯಾವುವು ಗೊತ್ತಾ..?
ಕಳೆದ ಒಂದೂವರೆ ವರ್ಷದ ಹಿಂದೇ ತನ್ನ ಅಕ್ಕಳನ್ನು ಮಾರುತಿಪುರ ಗ್ರಾಪಂ ವ್ಯಾಪ್ತಿಯ ಚಿಕ್ಕಮಣತಿ ಗ್ರಾಮದ ಮುತ್ತೂರಿಗೆ ಮದುವೆ ಮಾಡಿ ಕೊಟ್ಟಿದ್ದು, ಆಕೆಯ ಮನೆಗೆ ಮಜ್ಜಿಗೆ ಮೆಣಸಿನಕಾಯಿ ಕೊಟ್ಟು ಹೋಗುವುದಕ್ಕೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹೊಸನಗರ ಪಿಎಸ್ಐ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.