ಹುಬ್ಬಳ್ಳಿ: ಕಾರು ಮತ್ತು ಟಿಪ್ಪರ ನಡುವೆ ಅಪಘಾತವಾದ ಪರಿಣಾಮ, ಕಾರು ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಈಗಷ್ಟೇ ನಡೆದಿದೆ.
ಹೌದು, ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತವಾಗಿದೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.