ಶಿವಮೊಗ್ಗ:- ಜಿಲ್ಲೆಯ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ಟಿಪ್ಪರ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ಹೊಸನಗರ ತಾಲೂಕಿನ ಬುಲ್ಡೋಜರ್ ಗುಡ್ಡ ಗ್ರಾಮದ 6 ಜನರಿಗೆ ಗಂಭೀರ ಗಾಯವಾದ ಘಟನೆ ಜರುಗಿದೆ
ಗಾಯಾಳುಗಳಿಗೆ ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾರಿನಲ್ಲಿ 4 ಜನ ಮಹಿಳೆಯರು, 2 ಮಂದಿ ಪುರುಷರು, 4 ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.