ಕೋಲಾರ:- ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಅಮಿತ್ ಶಾ!
ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. 45 ವರ್ಷದ ರಾಧಪ್ಪ, 45 ವರ್ಷದ ವೆಂಕಟರಾಮಪ್ಪ, ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.