ಬೆಂಗಳೂರು:– ರಾಜಧಾನಿ ಬೆಂಗಳೂರಿನ ಅಶ್ವತ್ ನಗರದಲ್ಲಿ ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್ ಲೀಕ್ ಆಗಿ ಪ್ರಜ್ಞೆ ತಪ್ಪಿ ಬಾತ್ರೂಮ್ನಲ್ಲೇ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ.
23 ವರ್ಷದ ರಮ್ಯ ಮೃತ ದುರ್ದೈವಿ. ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಗ್ಯಾಸ್ ಗೀಸರ್ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್ ರೂಮ್ಗೆ ಹೋಗಿದ್ದಾರೆ. ಗೀಸರ್ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಕುಟುಂಬಸ್ಥರು ರಮ್ಯಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದೆ.
ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.