ಮೈಸೂರು : ಮಹಾಕುಂಭದ ಪ್ರಯುಕ್ತ ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಬರುವಾಗ ಅವಘಡ ಸಂಭವಿಸಿದ್ದು, ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದ ಮಿರ್ಜಾಪುರ ಬಳಿ ಲಾರಿ ಮತ್ತು ಕಾರಿ್ ಮಧ್ಯೆ ಡಿಕ್ಕಿಯಾಗಿದ್ದು, ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಮಹಾಕುಂಭದಲ್ಲಿ ಕಾಲ್ತುಳಿತ ಪ್ರಕರಣ ; ಭಕ್ತರು ಭಯ ಪಡದಂತೆ ಶಾಸಕ ಮಹೇಶ್ ಟೆಂಗಿನಕಾಯಿ ಮನವಿ
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತ ದುರ್ದೈವಿಗಳು. ಇಬ್ಬರು ಸಹ ಪ್ರಯಾಗ್ ರಾಜ್ ಯಾತ್ರೆಗೆ ಹೋಗಿದ್ದು, ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ,ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ.