ತಾಂಜಾನಿಯಾದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಲಿಡುಂಬೆ ವ್ಯಾಪ್ತಿಯಲ್ಲಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರೊಂದು ಪಲ್ಟಿಯಾಗಿ ಜನಸಮೂಹಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪೊಲೀಸರು ಪ್ರಾಥಮಿಕವಾಗಿ ಪತ್ತೆ ಹಚ್ಚಿದ್ದರು. ಕಾರು ಅಪಘಾತಕ್ಕೆ ಸಂಭವನೀಯ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತಾಂಜೇನಿಯಾ ಅಧ್ಯಕ್ಷ ಸಾಮಿಯಾ ಸುಲುಹು ಹಸನ್ ಪ್ರತಿಕ್ರಿಯಿಸಿದ್ದಾರೆ. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

