ಮೈಸೂರು: ಟಿಂಬರ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ನಾಶವಾದ ಘಟನೆ ಮೈಸೂರಿನ ಆಂದೋಲನ ವೃತ್ತದ ಬಳಿ ನಡೆದಿದೆ.
ಯೂಸ್ರಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.