ಹಾವೇರಿ: ದನದ ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು, ಹಸು-ಕರುಗಳು ಸಜೀವದಹನವಾಗಿವೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾ,ಮದಲ್ಲಿ ಘಟನೆ ನಡೆದಿದೆ.
ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಬೆಂಕಿಗಾಹುತಿಯಾತಿದೆ. ಪರಿಣಾಮವಾಗಿ 6 ಹಸು, 2 ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.