ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.
ಇಮ್ರಾನ್ ಬಂಧಿತ ಆರೋಪಿ. ವಿವಾಹಿತ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದ. ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಆರೋಪಿಯು ಜನವರಿ 9 ರಂದು ತನ್ನೊಂದಿಗೆ ಬರಲು ಮಹಿಳೆಗೆ ಆಮಿಷವೊಡ್ಡಿದ್ದ, ಪತಿಯ ದೂರಿನ ಮೇರೆಗೆ ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡು ಇಮ್ರಾನ್ನನ್ನು ಬಂಧಿಸಿದ್ದಾರೆ. ಮಹಿಳೆಯನ್ನು ರಕ್ಷಿಸಲಾಗಿದೆ.
ಸಂತ್ರಸ್ತೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಇಮ್ರಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ . ಪತಿ ತನ್ನ ದೂರಿನಲ್ಲಿ ಇಮ್ರಾನ್ ತನ್ನ ಹೆಂಡತಿಯನ್ನು ಮನೆಯಿಂದ ಹೊರಹೋಗುವಂತೆ ಆಮಿಷವೊಡ್ಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಜನವರಿ 24 ರಂದು ಸೆಕ್ಷನ್ 87 ಮತ್ತು ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಖೋಡಾ ನಿವಾಸಿಯಾಗಿರುವ ಇಮ್ರಾನ್ ತನ್ನ ಹೆಂಡತಿಗೆ ತಮ್ಮ ಮದುವೆಗೂ ಮುಂಚೆಯಿಂದಲೂ ಪರಿಚಯವಿದ್ದಾನೆ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ.