ಬೆಂಗಳೂರು;-ವಿಚಾರಣೆ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೈತ್ರಾ ಕುಂದಾಪುರಳನ್ನು ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿದೆ.
ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪುರಳನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಫಿಟ್ಸ್ ಇತ್ತೆಂದು ಹೇಳಲಾಗಿತ್ತು. ಆದರೆ ಕಳೆದ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಆಕೆಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಗೆ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.

ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ನಂತರ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಕಚೇರಿಗೆ ಕರೆತಂದಿದ್ದು, ಇಂದಿನಿಂದಲೇ ವಿಚಾರಣೆ ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
