ಬೆಳಗಾವಿ:- ಇಲ್ಲಿನ ಉ ದ್ಯಮಿ ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಮೃತಪಟ್ಟಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಪದ್ಮನ್ನವರ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆ ಪ್ರಕರಣದ ಮೂವರು ಆರೋಪಿಗಳಾದ ಸಂತೋಷ ಪತ್ನಿ ಉಮಾ ಪದ್ಮನ್ನವರ, ಶೋಭಿತ್ಗೌಡ, ಪವನ್ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ.
BBK11: “ಶೋ” ಕೂಡಲೇ ನಿಲ್ಲಿಸಬೇಕು: ಬಿಗ್ ಬಾಸ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!
ಮಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಶೋಭಿತ್ಗೌಡ, ಪವನ್ ವಶಕ್ಕೆ ಪಡೆದಿದ್ದ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಇಡೀ ದಿನ ವಿಚಾರಣೆ ಆದ ಬಳಿಕ ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಮಾಳಮಾರುತಿ ಠಾಣೆ ಪೊಲೀಸರು ರವಾನಿಸಿದ್ದಾರೆ.