ಬೆಂಗಳೂರು:- ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
26 ವರ್ಷದ ಶುಭಾಂಗ್ ಜೈನ್ ಬಂಧಿತ ಆರೋಪಿ. ಆರೋಪಿಯು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಈ ವೇಳೆ ಕಂಪನಿಯ ಕ್ರಿಪ್ಟೋ ಕರೆನ್ಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಪಾಸ್ವರ್ಡ್ ಬದಲಿಸಿ ರೂಪಾಯಿಗೆ ಕನ್ವರ್ಟ್ ಮಾಡಿ ಬಳಿಕ ಸ್ನೇಹಿತರ ಖಾತೆಗಳಿಗೆ ವರ್ಗಾವಣೆ ಮಾಡಿ ವಂಚಿಸಿದ್ದ.
ಈ ಕುರಿತು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಬಳಿಕ ನಿರಂತರ ತನಿಖೆ ನಡೆಸಿದ ಅಧಿಕಾರಿಗಳು, ಇದೀಗ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಂಧಿತನಿಂದ 2 ಮೊಬೈಲ್, ಎರಡು ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.