ಬೆಂಗಳೂರು: ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್.
BIGG BREAKING: 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ಅಸ್ತು: ಹೈಕೋರ್ಟ್’ನಿಂದ ಮಹತ್ವದ ತೀರ್ಪು
ಮಗು ಪೋಷಕರನ್ನು ರಾಯಚೂರಿಗೆ ಕರ್ಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ಕಸ್ಟಡಿ ಗೆ ಕೇಳಿದ್ದರು ಬ್ಯಾಡರಹಳ್ಳಿ ಪೊಲೀಸರು. ಸದ್ಯ ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೋನುವನ್ನು ಪೊಲೀಸರು ಕಳುಹಿಸಲಿದ್ದಾರೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.