ತಡರಾತ್ರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ (Darshan), ಚಿಕ್ಕಣ್ಣ, ಡಾಲಿ ಧನಂಜಯ್ಯ, ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ದೇಶಕ ತರುಣ್ ಸುಧೀರ್ ಹಾಗು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಸುಬ್ರಮಣ್ಯ ನಗರ ಪೊಲೀಸ್ (Police) ಠಾಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ ಮಾಲೀಕರು ಹಾಗೂ ಮ್ಯಾನೇಜರ್ ಮೇಲೆ ಎಫ್.ಐ. ಆರ್ ದಾಖಲಾಗಿತ್ತು. ಪಾರ್ಟಿ ಮಾಡಿದ ನಟರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಪೊಲೀಸರು. ಇಂದು ಎಲ್ಲರೂ ಒಟ್ಟಾಗಿ ಸುಬ್ರಮಣ್ಯ ನಗರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.