ಬೆಂಗಳೂರು:- ಮಾರ್ಫಿಂಗ್ ವಿಡಿಯೋ ಹರಿಬಿಟ್ಟ ಆರೋಪದಡಿ DCM ಡಿಕೆಶಿ ಸೇರಿ ಇತರರ ವಿರುದ್ಧ ಆರ್ ಅಶೋಕ್ ದೂರು ನೀಡಿದ್ದಾರೆ.
ಸಾಗರ: ವಿಜೇಂದ್ರನಿಗೆ ತಾಕತ್ತು ದಮ್ಮಿದ್ರೆ ನಮ್ಮ ಸರ್ಕಾರ ಉರಳುಸಕ್ಕೆ ಆಗುತ್ತಾ ಕೇಳಿ : ಶಾಸಕ ಬೇಳೂರು ಗೋಪಾಲಕೃಷ್ಣ!
ಬಸ್ ಟಿಕೆಟ್ ದರ ಏರಿಕೆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಶೇರ್ ಮಾಡುವ ಮೂಲಕ ಆರೋಪಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆರ್ ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ದರ ಏರಿಕೆ ವಿರುದ್ಧ ನಿನ್ನೆ ಮೆಜೆಸ್ಟಿಕ್ನಲ್ಲಿ ಪ್ರತಿಭಟನೆ ವೇಳೆ ವಿಪಕ್ಷನಾಯಕ ಆರ್.ಅಶೋಕ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ಉಂಟಾಗಿತ್ತು. ಈ ವೇಳೆ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋವೊಂದನ್ನು ಹಂಚಿಕೊಂಡಿತ್ತು. ಸದ್ಯ ಈ ವಿಚಾರವಾಗಿ ಮಾರ್ಫಿಂಗ್ ವಿಡಿಯೋಯನ್ನು ಕೆಪಿಸಿಸಿ ಎಕ್ಸ್, ಫೇಸ್ಬುಕ್ ಖಾತೆಗಳಲ್ಲಿ ಹಂಚಿರುವುದಾಗಿ ಆರೋಪಿಸಿ ದೂರು ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂವಹನ ಅಧ್ಯಕ್ಷ ರಮೇಶ್ ಬಾಬು, ಸಹ ಅಧ್ಯಕ್ಷೆ ಐಶ್ವರ್ಯ ಮಹದೇವ್, ಉಪಾಧ್ಯಕ್ಷ ಇ.ಸತ್ಯಪ್ರಕಾಶ್, ಕೆಪಿಸಿಸಿ ಸಾಮಾಜಿಕ ಮಾಧ್ಯಮ ಸಹ ಅಧ್ಯಕ್ಷ ವಿಜಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ವಿರುದ್ಧ ದೂರು ನೀಡಿರುವ ಆರ್.ಅಶೋಕ್, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಬಸ್ ದರ ಏರಿಕೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ವೇಳೆ ನಾನು ಆಕ್ಷೇಪಾರ್ಹ ಮಾತು ಆಡಿದ್ದೇನೆ ಎಂದು ಸುಳ್ಳು ಸುದ್ದಿ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ಕರ್ನಾಟಕದಲ್ಲಿರುವ ಡರ್ಟಿ ಟ್ರಿಕ್ಸ್ ಇಲಾಖೆಯು ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ನಕಲಿ ಮತ್ತು ತಿರುಚಿದ ವಿಡಿಯೋಗಳನ್ನು ಹರಿಬಿಟ್ಟಿದೆ.
ಈ ಪ್ರತಿಯೊಂದು ಪ್ರಕರಣಗಳಿಗೆ ನಾನು ಕಾನೂನಿನ ಮೂಲಕ ಪ್ರತಿಕ್ರಿಯಿಸುತ್ತೇನೆ. ಆ ಮೂಲಕ ಇದರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಸೆಲ್ ಮತ್ತು ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಆರ್ ಅಶೋಕ್ ಟ್ವೀಟ್ ಮಾಡಿದ್ದಾರೆ.