ಬೆಂಗಳೂರಿನ ಜೆಟ್ಲ್ಯಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಂಟು ಮಂದಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನಟ ದರ್ಶನ್ ಸೇರಿ ಎಂಟು ಮಂದಿ ಜೆಟ್ಲ್ಯಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಇದೀಗ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ಲ್ಯಾಗ್ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೋಟಿಸ್ ಜಾರಿಯಾಗಿತ್ತು. ವಿಚಾರಣೆಗೆ ಹಾಜರಾದ 8 ಜನರು ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.