ಬೆಂಗಳೂರು: ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಖತರ್ನಾಕ್ಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಸಾಫ್ಟ್ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಎಸ್ಕೇಪ್ ಆಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
Mutual Fund: ಜಸ್ಟ್ 1 ಲಕ್ಷ ಹೂಡಿಕೆ ಮಾಡಿದ್ರೆ ಸಾಕು 1 ಕೋಟಿ ರೂ. ನಿಮ್ಮದಾಗುತ್ತೆ! ಹೇಗೆ ಗೊತ್ತಾ..?
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.