ಕಾಪಿರೈಟ್ಸ್ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ,ನಿರ್ಮಾಪಕ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಪಿರೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಇದರ ಬೆನ್ನಲ್ಲೇ, ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್ನಿಂದ ಸುದೀರ್ಘ ಪತ್ರ ಬರೆದಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಲಾಗಿದೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಕೆಎಸ್ಆರ್ಟಿಸಿ ಸ್ಪೆಷಲ್ ಪ್ಯಾಕೇಜ್ ಟೂರ್
ನಾವು ಈ ಬಹಿರಂಗ ಪತ್ರವನ್ನು ಎಂಆರ್ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ” ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.
ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್ ಅನ್ನು ಮೀರಿತ್ತು. ಎಂ ಆರ್ ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ” ಎಂದು ಪರಂವಃ ಸ್ಟುಡಿಯೋಸ್ ಪತ್ರದ ಮೂಲಕ ತಿಳಿಸಿದೆ.