ಕೋಲಾರ – ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿದ ಮುಳಬಾಗಿಲು ಮಾರುತಿ ನಗರದ ವಾಸಿ ಕಾರು ಚಾಲಕ ಗಂಗಾಧರ್ ಅಲಿಯಾಸ್ ತೇಜು ಬಿನ್ ಸಾದಪ್ಪ ಎಂಬ ಆರೋಪಿಗೆ ಕೋಲಾರ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ದಂಡ ವಿಧಿಸಿದೆ.
ಇನ್ವೆಸ್ಟ್ ಕರ್ನಾಟಕ- 2025 ಸಮಾವೇಶಕ್ಕೆ ಅದ್ದೂರಿ ತೆರೆ: ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆ..!
ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿದ ಸಂಬಂಧ 2023ರ ಮೇ 17ರಂದು ನೀಡಿದ ದೂರಿನ ಮೇರೆಗೆ ಕಲಂ 6 ಪೋಕ್ಸೊ ಕಾಯ್ದೆಯಡಿ ಹಾಗು ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬೇತಮಂಗಲ ಠಾಣೆಯ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಪ್ರಸಾದ್ ಅವರು ಅಪರಾಧಿಗೆ ಕಲಂ 6 ಪೋಕ್ಸೊ ಕಾಯ್ದೆಯಡಿ ಹಾಗು ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ 20 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ದಂಡ ವಿಧಿಸಿದ್ದಾರೆ. ಜೊತೆಗೆ ನೊಂದ ಬಾಲಕಿಗೆ ಸರ್ಕಾರದ ವತಿಯಿಂದ 4 ಲಕ್ಷ ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.