ಮೈಸೂರು:- ದಸರಾ ಆನೆಗಳ ಮುಂದೆ ಸೆಲ್ಫಿ ತೆಗೆದುಕೊಂಡ್ರೆ ಕ್ರಮ ಆಗಬೇಕು ಎಂದು ಯದುವೀರ್ ಹೇಳಿದ್ದಾರೆ.
ಈ ಸಂಬಂಧ ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ ವಿಡಿಯೋ ನೋಡಿದ್ದೇನೆ. ಇದು ಜನರಿಂದ ಆಗಿರುವುದಲ್ಲ ಎಂದು ವರದಿ ಬಂದಿದೆ. ಭದ್ರತೆಯನ್ನು ಇನ್ನಷ್ಟು ಹೆಚ್ಚು ಮಾಡಬೇಕು. ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಆನೆಗಳ ಮುಂದೆ ಫೋಟೊ, ವಿಡಿಯೋ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು ಎಂದರು.
ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ದಂಪತಿಗೆ ಜಡ್ಜ್ ಹೇಳಿದ್ದೇನು ಗೊತ್ತಾ!?
ಮಹಿಷಾ ದಸರಾ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಂವಿಧಾನ ದೃಷ್ಟಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಡಿದರೆ ತೊಂದರೆ ಇಲ್ಲ. ಯಾರಿಗೂ ಯಾವುದೇ ರೀತಿಯ ಹಾನಿಯಾಗದ ರೀತಿ ಕಾರ್ಯಕ್ರಮ ಮಾಡಿಕೊಳ್ಳಬಹುದು. ಅದನ್ನ ಯಾರು ನಿಲ್ಲಿಸಲು ಸಾಧ್ಯವಿಲ್ಲ. ತಾಯಿ ಚಾಮುಂಡೇಶ್ವರಿಯಲ್ಲಿ ನಂಬಿಕೆಯಿಟ್ಟ ಎಲ್ಲರೂ ಮತ್ತು ಧರ್ಮದಲ್ಲಿ ನಂಬಿಕೆ ಇಟ್ಟ ಎಲ್ಲರ ಭಾವನೆಗೆ ಧಕ್ಕೆಯಾಗದ ರೀತಿ ಮಾಡಿಕೊಳ್ಳಿ ಎಂದು ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ವಿಚಾರವಾಗಿ ಮಾತನಾಡಿ, ಚಾಮುಂಡೇಶ್ವರಿ ತಾಯಿ ಕ್ಷೇತ್ರ ಅದು. ಜಿಲ್ಲಾಡಳಿತ ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಪದ್ಧತಿ ಏನಿದೆ, ಧರ್ಮದಲ್ಲಿ ನಾವು ಏನು ಅನುಸರಿಸುತ್ತೇವೆ, ನಮ್ಮ ನಂಬಿಕೆ ಏನಿದೆ, ಅದಕ್ಕೆ ಧಕ್ಕೆ ಬರಬಾರದು ಎಂದು ಮಹಿಷ ದಸರಾ ಆಚರಣೆ ಸಮಿತಿಗೆ ಎಚ್ಚರಿಕೆ ನೀಡಿದರು.