ಬೆಂಗಳೂರು:- ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು DCM DK ಶಿವಕುಮಾರ್ ಹೇಳಿದ್ದಾರೆ.
Udayanidhi: ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ: ಉದಯನಿಧಿ!
ಈ ಸಂಬಂಧ ಮಾತನಾಡಿದ ಅವರು,ಇನ್ನೆರಡು ಮೂರು ದಿನಗಳಲ್ಲಿ ಕೆಆರ್ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ ಎಂದರು.
ಇನ್ನೂ ನಾವು ಮುಂಜಾಗ್ರತೆಯಿಂದ ರಂಗನತಿಟ್ಟು ಸೇರಿ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.