ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ಪರ ಘೋಷಣೆ ಕೂಗಿ ಹರ್ಷ ವ್ಯಕ್ತ ಪಡಿಸಿದ ಕಾರ್ಯಕರ್ತರು.