ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ಖಳ ನಟನಾಗಿ ಅಭಿನಯಿಸಿದ್ದ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮಿಳು ಚಿತ್ರ ರಂಗದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ ಡೇನಿಯಲ್ ಬಾಲಾಜಿ ನಿನ್ನೆ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆನೋವಿನಿಂದ ಬಳಲುತ್ತಿದ್ದ ನಟನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
48 ವರ್ಷದ ನಟನ ಹಠಾತ್ ಸಾವು ತಮಿಳು ಚಿತ್ರರಂಗ ಮತ್ತು ಅವರ ಅಭಿಮಾನಿಗಳನ್ನು ನೋವುಂಟು ಮಾಡಿದೆ. ಬಾಲಾಜಿ ನಿಧನಕ್ಕೆ ಸಿನಿಮಾ ರಂಗದವರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ.