ಬೆಂಗಳೂರು: ನಟ ದರ್ಶನ್ ಅವರನ್ನು ವ್ಯಕ್ತಿಯೊಬ್ಬರ ಕೊಲೆ ಆರೋಪ ಪ್ರಕರಣ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ ಸೇರಿ ಅವರ 10 ಜನ ಸಹವರ್ತಿಗಳನ್ನು ಮೈಸೂರಿನ ಫಾರ್ಮ್ ಹೌಸ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಎಲ್ಲರನ್ನು ಬೆಂಗಳೂರಿಗೆ ಕರೆತಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಜೂನ್ 8ರ ರಾತ್ರಿ ಕಾಮಾಕ್ಷಿಪಾಳ್ಯದ ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿದ್ದು,ಶವವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು, ಮೃತನ ವಿವರ ಹಾಗೂ ಆತ ಹತ್ಯೆಯಾಗಿರುವುದನ್ನು ಖಚಿತಪಡಿಸಿಕೊಂಡಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ.
ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್ನಲ್ಲೇ ಹಲ್ಲೆ ಮಾಡಿ ಜೂನ್ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ಪ್ರಕರಣದ ಪ್ರಾರಂಭಿಕ ತನಿಖೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಣದ ವಿಚಾರವಾಗಿ ಹತ್ಯೆ ಮಾಡಿರುವುದಾಗಿ ಹೇಳಿದ್ದರು. ನಂತರ ಹೆಚ್ಚಿನ ವಿಚಾರಣೆ ನಡೆಸಿದಾಗ ಕೆಲವು ಮಾಹಿತಿಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)