ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ದರ್ಶನ್ ಅವರಿಗೆ ಆರು ತಿಂಗಳ ಬಳಿಕ ಕೋರ್ಟ್ನಿಂದ ಪೂರ್ಣಪ್ರಮಾಣದ ಜಾಮೀನು ಸಿಕ್ಕಿದೆ. ಇಷ್ಟು ದಿನಗಳ ಕಾಲ ಜೈಲು ಹಾಗೂ ಆಸ್ಪತ್ರೆಯಲ್ಲಿ ಕಾಲ ಕಳೆದು ಸುಸ್ತಾಗಿದ್ದ ದರ್ಶನ್ ಈಗ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಬೆನ್ನಲ್ಲೇ ನಟ ದರ್ಶನ್ ಚಿಕಿತ್ಸೆಗಾಗಿ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ರೆಗ್ಯೂಲರ್ ಬೇಲ್ ಪಡೆದು ಹೊರಬಂದಿರುವ ನಟ ದರ್ಶನ್ ನೆನ್ನೆಯಷ್ಟೆ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ನಡುವೆಯೆ ದರ್ಶನ್ ಸೆಷನ್ಸ್ ಕೋರ್ಟ್ಗೆ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದು. 4 ವಾರಗಳ ಕಾಲ ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿದ್ದಾರೆ.
Recruitment 2024: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ.! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಇದರ ಮಧ್ಯದಲ್ಲಿ ನ್ಯಾಯಾಲಯ ಅಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ SPP ಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ದರ್ಶನ್ಗೆ ರೆಗ್ಯೂಲರ್ ಜಾಮೀನು ನೀಡಿ ಆದೇಶ ಹೊರಡಿಸಿರುವ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ. ಇದೇ ಕಾರಣಕ್ಕೆ ದರ್ಶನ್ ಮೈಸೂರಿಗೆ ತೆರಳಿ ಚಿಕಿತ್ಸೆ ಪಡೆಯಲು ನ್ಯಾಯಾಲಯದ ಬಳಿ ಅರ್ಜಿ ಸಲ್ಲಿಸಿದ್ದಾರೆ. ವಾದ ಪ್ರತಿವಾದ ಆಲಿಸಿ ಸೋಮವಾರಕ್ಕೆ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ..