ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಇನ್ನೂ ಇದಕ್ಕೆ ಸಂಬಂಧ ಪಟ್ಟಂತೆ ರೇಣಕಾಸ್ವಾಮಿ ಅವರ ತಂದೆ ಕಾಶೀನಾಥಯ್ಯ ಚಿತ್ರದುರ್ಗದಲ್ಲಿ ಪ್ರತಿಕ್ರಿಯೇ ನೀಡಿದ್ದಾರೆ. ‘ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಮಂಜೂರು ಬಗ್ಗೆ ಮಾಧ್ಯಮಗಳಿಂದ ತಿಳಿದಿದೆ.
Online Shopping: ಆನ್ʼಲೈನ್ ಶಾಪಿಂಗ್ ಮಾಡುವಾಗ ಮೋಸ ಹೋಗದಿರಲು ಈ ಟಿಪ್ಸ್ ಪಾಲೋ ಮಾಡಿ!
ವಿಚಾರಣೆ ಬಳಿಕ ಸೂಕ್ತ ನ್ಯಾಯ ಸಿಗುವ ನಂಬಿಕೆಯಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಆಗಿರಬಹುದು. ಆದರೆ ಅಂತಿಮವಾಗಿ ಆರೋಪಿಗಳಿಗೆ ಶಿಕ್ಷೆ ಆಗುವ ನಂಬಿಕೆಯಿದೆ’ ಎಂದು ಕಾಶಿನಾಥಯ್ಯ ಅವರು ಹೇಳಿದ್ದಾರೆ.
ಸರ್ಕಾರ ನಮ್ಮ ಸೊಸೆ ಸಹನಾಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಹೇಳುತ್ತಾ ಕಾಶೀನಾಥಯ್ಯ ಅವರು ಭಾವುಕರಾಗಿದ್ದಾರೆ. ‘ದರ್ಶನ್ ನಮ್ಮ ಜತೆ ಮಾತುಕತೆಗೆ ಬರುವ ವಿಚಾರ ಇಲ್ಲ. ದರ್ಶನ್ ಜತೆ ಮಾತನಾಡುವಂಥದ್ದು ಏನೂ ಇಲ್ಲ. ನಾವು ಮಗನ ಕಳೆದುಕೊಂಡು ದುಖ:ದಲ್ಲಿದ್ದೇವೆ. ನಮಗೆ ಮಗ ಬೇಕೆ ಹೊರತು ಮಾತುಕತೆ ಏನೂ ಬೇಕಿಲ್ಲ’ ಎಂದು ಕಾಶಿನಾಥಯ್ಯ ಅವರು ಹೇಳಿದ್ದಾರೆ.