ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.
Causes Of Snoring: ಸಿಕ್ಕಾಪಟ್ಟೆ ಗೊರಕೆ ಹೊಡೆಯುತ್ತೀರಾ.? ಹಾಗಾದ್ರೆ ಇದೇ ನೋಡಿ ಕಾರಣ.?
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ ಮೂವತ್ತು ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.