ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು (Darshan) ಮಂಡ್ಯ ಲೋಕಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಕಾಂಗ್ರೆಸ್ ಇಂದು ಕರೆತರುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ಬೆನ್ನಿಗೆ ನಿಂತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು (Star Chandru) ಪರ ಅಬ್ಬರದ ಪ್ರಚಾರ ಮಾಡಲು ಮುಂದಾಗಿದ್ದಾರೆ. ಸುಮಲತಾ ಅವರು ದರ್ಶನ್ ಅವರನ್ನು ತಮ್ಮ ಮೊದಲ ಮಗ ಎಂದು ಹೇಳುತ್ತಿದ್ದರು. ಸುಮಲತಾ ಅವರು ತಮ್ಮ ನಿಲುವು ಘೋಷಣೆ ಮಾಡುವ ವೇಳೆಯೂ ದರ್ಶನ್ ಅವರೊಂದಿಗೆ ಬೆನ್ನಿಗೆ ನಿಂತಿದ್ದರು.
ಸುಮಲತಾ ಅವರು ಬಿಜೆಪಿ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್ಗೆ ಬೆಂಬಲ ಸಹ ಘೋಷಣೆ ಮಾಡಿದ್ದಾರೆ. ಇದೀಗ ದರ್ಶನ್ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧವಾಗಿ ಮಂಡ್ಯದಲ್ಲಿ ದರ್ಶನ್ ಅವರು ಪ್ರಚಾರಕ್ಕೆ ಧುಮುಕಿದ್ದಾರೆ. ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಪರ ಸ್ಥಳೀಯ ಶಾಸಕ ನರೇಂದ್ರಸ್ವಾಮಿ ಜೊತೆಗೂಡಿ ಸ್ಟಾರ್ ಚಂದ್ರು ಮುಂದೆ ಇಟ್ಟುಕೊಂಡು ಪ್ರಚಾರ ಮಾಡಲಿದ್ದಾರೆ.
Gujarat businessman: 200 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ!
ಇಂದು ಬೆಳಗ್ಗೆಯಿಂದ ಸಂಜೆ 4:45ರವರೆಗೆ ನಟ ದರ್ಶನ್ ಸ್ಟಾರ್ ಚಂದ್ರು ಪರ 17 ಗ್ರಾಮಗಳಲ್ಲಿ ಅಬ್ಬರದ ಮತಯಾಚನೆ ಮಾಡಲಿದ್ದಾರೆ. ಒಟ್ಟಾರೆ ಕಳೆದ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಪ್ರಚಾರ ಮಾಡಿದ್ದ ದರ್ಶನ್ ಇಂದು ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲಿದ್ದಾರೆ. ದರ್ಶನ್ ಪ್ರಚಾರ ಹೆಚ್ಡಿಕೆ ಕಟ್ಟಿ ಹಾಕಲು ಎಷ್ಟರಮಟ್ಟಿಗೆ ವರ್ಕೌಟ್ ಆಗುತ್ತೆ ಎಂಬುದನ್ನು ಕಾದುನೋಡಬೇಕಿದೆ.