ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್ ಇದೀಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಜಾಮೀನು ಸಿಕ್ಕ ಬಳಿಕ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಕುಟುಂಬ ಸದಸ್ಯರ ಜೊತೆ ಆಚರಿಸಿದ್ದ ದರ್ಶನ್ ಇದೀಗ ಕುಟುಂಬಸ್ಥರ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಂಕ್ರಾಂತಿ ಹಬ್ಬದ ಸಂಭ್ರಮದಿಂದ ಆಚರಿಸಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದೇವಸ್ಥಾನದಲ್ಲಿ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಬಳಿಕ ಇದೇ ಮೊದಲ ಬಾರಿ ದರ್ಶನ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಪ್ರತಿವರ್ಷದಂತೆ ದರ್ಶನ್ ಎಂದಿನಂತೆ ಈ ವರ್ಷವೂ ಕೂಡ ಜ.14ರಂದು ಸಂಕ್ರಾಂತಿ ಹಬ್ಬ ಸೆಲೆಬ್ರೇಟ್ ಮಾಡಿ ಸಂಭ್ರಮಿಸಿದ್ದಾರೆ. ಫಾರಂ ಹೌಸ್ನಲ್ಲಿ ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಜೊತೆ ಹಬ್ಬ ಆಚರಿಸಿದ್ದು ಇದೀಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ