ಖ್ಯಾತ ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ.
ನಿನ್ನೆ ಡಿಕೆಶಿಯನ್ನು ಭೇಟಿ ಮಾಡಿದ್ದ ಸುದೀಪ್, ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯ ಭೂಮಿಯನ್ನು ಅಭಿಮಾನಿಗಳ ಕೋರಿಕೆಯ ಮೇರೆಗೆ
ಹಾಗೆಯೇ ಉಳಿಸಿಕೊಳ್ಳಬೇಕು ಮತ್ತು ಹತ್ತು ಗುಂಟೆ ಜಮೀನನ್ನು ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ?
ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ.