ದಕ್ಷಿಣ ಭಾರತ ಮತ್ತು ಕನ್ನಡ ಸಿನಿಮಾ ರಂಗದ ಖ್ಯಾತ ನಟ ಕಿಶೋರ್ ಕುಮಾರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ರಾಯಭಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. 2024-2025ನೇ ಸಾಲಿನ 16ನೇ ಬೆಂಗಳೂರು ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಮಾರ್ಚ್ 1ರಿಂದ 8ರ ತನಕ ಬೆಂಗಳೂರಿನಲ್ಲಿ ನಡೆಯಲಿದೆ.
ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರದ ಸಲುವಾಗಿ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ಕರ್ನಾಟಕ ಸರ್ಕಾರ ನೇಮಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. 8 ದಿನಗಳ ಕಾಲ ನಡೆಯುವ ಈ ಸಿನಿಮೋತ್ಸವದಲ್ಲಿ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಅಲ್ಲದೇ, ಸಿನಿಮಾಗಳಿಗೆ ಸಂಬಂಧಿಸಿದ ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಕೂಡ ಇರಲಿದ್ದು, ಸಿನಿಮಾಸಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವು ‘ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಶೀರ್ಷಿಕೆಯಡಿ ನಡೆಯಲಿದೆ. ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಸಿನಿಮಾಗಳು ಭಾಗವಹಿಸಲಿದ್ದು, ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರು ಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ.