ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
73 ವರ್ಷದ ಚಕ್ರವರ್ತಿ ಅವರಿಗೆ ಶನಿವಾರ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರು ನಟ ಅರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿದ್ದು ಇದೀಗ ಮಿಥುನ್ ಚಕ್ರವರ್ತಿ ಉತ್ತಮ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣವಾಗಿ ಜ್ಞಾನ ಹೊಂದಿದ್ದು, ಮೃದುವಾದ ಆಹಾರವನ್ನು ಸೇವಿಸಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಕೆಲವು ಪರೀಕ್ಷೆಗಳಿಗೆ ಒಳಗಾಗುತ್ತಾರೆ ಎಂದು ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಅಧಿಕಾರಿ ತಿಳಿಸಿದ್ದಾರೆ.
ಮಿಥುನ್ ಅವರನ್ನು ಫೆ.10ರ ಬೆಳಿಗ್ಗೆ 9.40 ಕ್ಕೆ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ಮೆದುಳಿನ ಎಂಆರ್ಐ ಮತ್ತು ರೇಡಿಯಾಲಜಿ ಪರೀಕ್ಷೆ ಸೇರಿದಂತೆ ಇತರ ಪ್ರಮುಖ ಪರೀಕ್ಷೆಗಳನ್ನು ಸಹ ಮಾಡಲಾಗಿದೆ.ಸದ್ಯ ನಟನ ಆರೋಗ್ಯ ಸುಧಾರಿಸಿದ್ದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.