ಮುಂಬೈನಲ್ಲಿ ಈ ಬಾರಿಯ ವಿಶ್ವಕಪ್ನ ಹಾಟ್ ಫೇವರೇಟ್ ಭಾರತ ತಂಡ (Team India) ಇಂದು ವಿಶ್ವಕಪ್ನ (World Cup) ಮೊದಲ ಸೆಮಿ ಫೈನಲ್ನಲ್ಲಿ (Semi Final) ನ್ಯೂಜಿಲೆಂಡ್ (New Zealand) ತಂಡವನ್ನು ಎದುರಿಸಲಿದೆ. ಈ ಹೈ ವೋಲ್ಟೇಸ್ ತಂಡಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಸಾಕ್ಷಿ ಆಗುತ್ತಿದ್ದಾರೆ. ಈ ಪಂದ್ಯವನ್ನು ನೋಡುವುದಕ್ಕಾಗಿಯೇ ರಜನಿಕಾಂತ್ ಮುಂಬೈಗೆ ಬಂದಿಳಿದಿದ್ದು, ಭಾರತ ತಂಡಕ್ಕೆ ಅವರು ಹುರುಪು ತುಂಬಲಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತ ತಂಡ, ಈ ಬಾರಿ ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಏಕದಿನ ವಿಶ್ವಕಪ್ ಮಹಾ ಸಂಗ್ರಾಮ ಉಪಾಂತ್ಯಕ್ಕೆ ಬಂದಾಗಿದೆ. ಬಲಿಷ್ಠ ನಾಲ್ಕು ತಂಡಗಳ ಕಾದಾಟಕ್ಕೆ ರಣಾಂಗಣ ಕೂಡ ಸಜ್ಜಾಗಿದೆ. ಆದರೆ, ಈ ಬಾರಿಯ ಸೆಮಿಫೈನಲ್ನ ಮೊದಲ ಪಂದ್ಯ ಕೇವಲ ಪಂದ್ಯವಾಗಿ ಉಳಿದಿಲ್ಲ. ಬದಲಾಗಿ ಕಿವೀಸ್ ಪಡೆಯ ವಿರುದ್ಧ ಭಾರತ ತಂಡದ ಸೇಡಿನ ಸಮರವಾಗಿದೆ. ಐಸಿಸಿ (ICC) ಟೂರ್ನಿಯಲ್ಲಿ ಭಾರತ ತಂಡಕ್ಕೆ ಕಿವೀಸ್ ನೀಡಿದ ಆ ಎರಡು ಬ್ಯಾಕ್ ಟು ಬ್ಯಾಕ್ ಶಾಕ್ ಇನ್ನೂ ಕೂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಅಚ್ಚಾಗಿ ಉಳಿದಿದ್ದು, ಈ ಬಾರಿಯ ವಿಶ್ವಕಪ್ ಸೆಮಿಸ್ನಲ್ಲಿ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಕೂಡ ಹಳೇ ನೋವು ಮರೆಸುವ ನಿಟ್ಟಿನಲ್ಲಿ ಸಜ್ಜಾಗಿದೆ.